ಬೆಂಗಳೂರು,ಮೇ,2,2025 (www.justkannada.in): 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ ಶೇ 66.14 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಶೇ 66.14 ರಷ್ಟು ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ.
ಮಧ್ಯಾಹ್ನ 12.30ರ ನಂತರ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದು.
Key words: SSLC exam, results , announced