ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ, ಈ ಬಾರಿ 71.80 ರಷ್ಟು ಫಲಿತಾಂಶ…

ಬೆಂಗಳೂರು,ಆ,10,2020(www.justkannada.in):  ಕೊರೋನಾ ಮಹಾಮಾರಿ ನಡುವೆ ರಾಜ್ಯದಲ್ಲಿ ನಡೆದಿದ್ದ 2019-20ನೇ ಸಾಲಿನ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ.jk-logo-justkannada-logo

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದರು.  ಈ ಬಾರಿ 71.80 ರಷ್ಟು ಫಲಿತಾಂಶ ಬಂದಿದ್ದು ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಪ್ರಸಕ್ತ ವರ್ಷ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 2,879 ಪರೀಕ್ಷಾ ಕೇಂದ್ರಗಳ ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 330 ಹೆಚ್ಚುವರಿ ಕೇಂದ್ರಗಳನ್ನು ರಚಿಸಲಾಗಿತ್ತು.SSLC exam –Results- Published- 71.80 per cent.

5,82,316 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು . 2,28,734 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದರೇ ಯಾದಗಿರಿ ಕೊನೆಯ ಸ್ಥಾನ ಗಳಿಸಿದೆ. http://kseeb.kar.nic.in  ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Key words: SSLC exam –Results- Published- 71.80 per cent.