Saturday, September 12, 2026

BDA Apartments

Home Front Page ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ: ಪಿಯು ಪರೀಕ್ಷೆಯಲ್ಲಾದ ನ್ಯೂನ್ಯತೆ ನಿವಾರಣೆ- ಶಿಕ್ಷಣ...

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ: ಪಿಯು ಪರೀಕ್ಷೆಯಲ್ಲಾದ ನ್ಯೂನ್ಯತೆ ನಿವಾರಣೆ- ಶಿಕ್ಷಣ ಸಚಿವ ಸುರೇಶ್ ಕುಮಾರ್…

ಬೆಂಗಳೂರು,ಜೂ,25,2020(www.justkannada.in):   ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದೆ.ಪಿಯುಸಿ ಪರೀಕ್ಷೆಯಲ್ಲಾದ ನ್ಯೂನ್ಯತೆ ನಿವಾರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.sslc-examination-education-minister-suresh-kumar-2

ಪರೀಕ್ಷಾ ಸುರಕ್ಷತಾ ಕ್ರಮಗಳ ಕುರಿತು  ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳಲಾಗಿದೆ.  ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಬೇಕು. ಪೊಲೀಸರು ಮತ್ತು ಸ್ವಯಂಸೇವಕರು ನೆರವಿನ ಹಸ್ತ ಚಾಚಿದ್ದಾರೆ. ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗಿದೆ ಎಂದು  ತಿಳಿಸಿದರು.

 

Key words: SSLC examination -Education Minister- Suresh Kumar.