ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ : ಸರ್ಕಾರದಿಂದ ತಯಾರಿ: ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಮಾರ್ಚ್,27,2022(www.justkannada.in):  ನಾಳೆಯಿಂದ ಎಸ್.ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳು ಭಯ ಇಲ್ಲದೆ ಪರೀಕ್ಷೆ ಬರೆಯಬೇಕು ಎಂಧು ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದರು.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಗೆ ಸರ್ಕಾರ ತಯಾರಿ ಮಾಡಿಕೊಂಡಿದೆ.  ಸರಳವಾಗಿ ಪರೀಕ್ಷೆಯನ್ನ ನಡೆಸುತ್ತಿದ್ದೇವೆ.  ವಿದ್ಯಾರ್ಥಿಗಳು ಮುಕ್ತವಾಗಿ ಪರೀಕ್ಷೆ ಬರೆಯಲಿ. ವಿದ್ಯಾರ್ಥಿಗಳಿ ಭಯ ಇಲ್ಲದೆ ಪರೀಕ್ಷೆ ಬರೆಯಬೇಕು. ಹಿಜಾಬ್ ಬಗ್ಗೆ ಹೈಕೋರ್ಟ್ ಆದೇಶ ಬಂದಿದೆ. ತೀರ್ಪು  ಬಂದ ಮೇಲೆ ಅನವಶ್ಯಕ ಹೇಳಿಕೆ ನೀಡಬಾರದು ಎಂದರು.

ರಾಜ್ಯದ ಜಲ ವಿವಾದಗಳ ಬಗೆಹರಿಸಲು ಪ್ರಯತ್ನ ಮಾಡುತ್ತೇವೆ. ಮೊದಲು ನಾನು ದೆಹಲಿಗೆ ಹೋಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ಸರ್ವಪಕ್ಷ ನಿಯೋಗ ಕರೆದೊಯ್ಯುತ್ತೇನೆ. ಶೀಘ್ರವೇ ಜಲವಿವಾದ ಬಗೆ ಹರಿಸಲು ಪ್ರಯತ್ನಿಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: SSLC-examination-tomorrow-CM Bommai