Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಕೋವಿಡ್ ಮಾರ್ಗಸೂಚಿಯೊಂದಿಗೆ ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

ಕೋವಿಡ್ ಮಾರ್ಗಸೂಚಿಯೊಂದಿಗೆ ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

ಬೆಂಗಳೂರು, ಜೂನ್ 26, 2022 (www.justkannada.in):  ನಾಳೆಯಿಂದ ಜುಲೈ 4ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ.

ಕೋವಿಡ್ ನಡುವೆಯೂ ನಡೆಯಲಿರುವಂತ ಪೂರಕ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಲಾಗಿದೆ .

ಈ ಬಾರಿ 94649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಎಸ್‌ಓಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿ, ಸಿಇಓಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಗೆ ಮುನ್ನಾ, ನಂತ್ರ ಸ್ಯಾನಿಟೈಸ್ ಮಾಡುವುದು, ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್ ಮಾಡುವುದು, ದೈಹಿಕ ಅಂತರ ಕಾಪಾಡುವುದು, ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿರಬೇಕು. ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಮಾಡುವುದು. ಕೆಮ್ಮು, ನೆಗಡಿ, ಜ್ವರ ಮೊದಲಾದವುಗಳಿಂದ ಬಳಲುತ್ತಿರೋ, ಲಕ್ಷಣಗಳಿರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಡಿಗಳೆಂದು ಕಾಯ್ದಿರಿಸುವುದು, ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳುವುದು ಎಂಬ ಸೂಚನೆಗಳನ್ನು ನೀಡಲಾಗಿದೆ.