Tuesday, August 11, 2026

BDA Apartments

Home Front Page ಕಾಂಗ್ರೆಸ್’ನಲ್ಲೇ ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಕಾಂಗ್ರೆಸ್’ನಲ್ಲೇ ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ಮೇ 29, 2022 (www.justkannada.in): ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮಾತಿಗೆ ತೂಕ ಇತ್ತು. ಆದರೀಗ ಅವರ ಪಕ್ಷದ ಕಾರ್ಯಕರ್ತರೇ ಅವರ ಮಾತನ್ನು ಕೇಳುತ್ತಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರುಮ, ಸಿದ್ದರಾಮಯ್ಯ ಅವರು ಆರ್ ಎಸ್‌ಎಸ್ ಬಗ್ಗೆ ಅಧ್ಯಯನ ಮಾಡಿಲ್ಲ. ಅವರನ್ನು ಒಮ್ಮೆ ಆರ್ ಎಸ್‌ಎಸ್ ಕಚೇರಿಗೆ ಕರೆದೊಯ್ಯುತ್ತೇವೆ. ಅವರು ಅಲ್ಲಿನ ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲಿ. ಇಲ್ಲವೇ ಆರ್ ಎಸ್‌ಎಸ್ ಕುರಿತ ಪುಸ್ತಕ ನೀಡುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

ಪಕ್ಷದಲ್ಲಿ ಸಿದ್ದರಾಮಯ್ಯ ಅವರನ್ನು ಕಡೆಗಣನೆ ಮಾಡಲಾಗಿದೆ. ಅವರ ಮಾತಿಗೆ ಕಿಮ್ಮತ್ತು ಇಲ್ಲ. ಕಡಗಣನೆ ಮಾಡುವಾಗ ಹೀಗೆ ಆರ್ ಎಸ್‌ಎಸ್, ಮತ್ತೊಂದು ವಿಚಾರ ಸೃಷ್ಟಿಸಿ ಮುಂಚೂಣಿಗೆ ಬರಲು ಯತ್ನಿಸುತ್ತಾರೆ ಎಂದಿದ್ದಾರೆ.

ಕಳೆದ ಎರಡು ವರ್ಷಗಳಿಂದ ನಾನು ಆರ್ ಎಸ್‌ಎಸ್ ಬಗ್ಗೆ ತಿಳಿದುಕೊಂಡಿದ್ದೇನೆ, ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದನ್ನು ಸಿದ್ದರಾಮಯ್ಯ ಅವರು ಸಹಿಸುತ್ತಿಲ್ಲಎಂದು ಸೋಮಶೇಖರ್ ಹೇಳಿದ್ದಾರೆ.