Friday, August 21, 2026

BDA Apartments

Home Front Page ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

ಬೆಂಗಳೂರು,ಆಗಸ್ಟ್,18,2023(www.justkannada.in):   ಹಿಂದೆ ಬಿಜೆಪಿಗೆ ಬಂದಿದ್ಧ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಎಸ್.ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಪ್ರಹ್ಲಾದ್ ಜೋಶಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲು ಅವರ ಜತೆ ಮಾತಾಡಿದ್ದೇನೆ. ಆ ರೀತಿ ಯಾವ ಬೆಳವಣಿಗೆ ಆಗಿಲ್ಲ. ಎಸ್.ಟಿ ಸೋಮಶೇಖರ್,  ಶಿವರಾಂ ಹೆಬ್ಬಾರ್ ಬಿಜೆಪಿ ಬಿಟ್ಟು ಹೋಗಲ್ಲ ಎಂದಿದ್ದಾರೆ. ನಾಳೆ ಏನಾಗುತ್ತೆ ಅಂತ ನಾನು ಭವಿಷ್ಯ ಹೇಳುವುದಕ್ಕೆ ಆಗಲ್ಲ. ನನಗಿರುವ ಮಾಹಿತಿ ಪ್ರಕಾರ ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಮುನೇನಕೊಪ್ಪ ಕೂಡ ಪಕ್ಷ ತೊರೆಯಲ್ಲ ಎಂದು ಹೇಳಿದ್ದಾರೆ ಎಂದರು.

ಮುಂದಿನ ಲೋಕಸಭೆ ಚುನಾವಣೆಗೆ ನಾನು ಧಾರವಾಡ ಕ್ಷೇತ್ರದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ  ತಿಳಿಸಿದರು.

Key words: ST Somashekhar-Shivram Hebbar – BJP-Union Minister- Prahlad Joshi.