ಬೆಂಗಳೂರು, ಜೂನ್,10,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆಯನ್ನ ಹೈಕೋರ್ಟ್ ಜೂನ್ 12ಕ್ಕೆ ಮುಂದೂಡಿಕೆ ಮಾಡಿದೆ.
ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಚಾರಣೆಯನ್ನು ಜೂನ್ 12 ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
ದುರಂತದ ಬಳಿಕ ಯಾವುದೇ ಪ್ರಕರಣಗಳನ್ನು ದಾಖಲಾಗಿರಲಿಲ್ಲ. ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ವಿಚಾರಣೆ ಮುಂದೂಡಿಕೆ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಆದರೆ ಸರ್ಕಾರ ಯಾವುದೇ ವರದಿ ಸಲ್ಲಿಸಿಲ್ಲ. ವಿಚಾರಣೆ ವೇಳೆ ಸರ್ಕಾರದಿಂದ ಇನ್ನೂ ವರದಿ ಏಕೆ ಸಲ್ಲಿಸಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ಪ್ರಶ್ನಿಸಿತು. ಈ ವೇಳೆ ಹೈಕೋರ್ಟ್ ಗೆ ಮಾಹಿತಿ ನೀಡಿದ ಎಜಿ ಶಶಿಕಿರಣ್ ಶೆಟ್ಟಿ, ನಾವು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದೇವೆ. ಹೀಗಾಗಿ ನ್ಯಾಯಾಂಗ ತನಿಖೆ ವರದಿ ಸಲ್ಲಿಸುತ್ತೇವೆ. ಅದ್ದರಿಂದ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಈ ನಡುವೆ ನ್ಯಾಯಪೀಠವು ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿಕೆ ಮಾಡಿದೆ.
Key words: Stampede case, High Court, postpones, PIL, hearing