Sunday, August 2, 2026

BDA Apartments

Home Front Page ಕಾಲ್ತುಳಿತ ಕೇಸ್: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದ ಆರ್.ಅಶೋಕ್

ಕಾಲ್ತುಳಿತ ಕೇಸ್: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದ ಆರ್.ಅಶೋಕ್

ಬೆಂಗಳೂರು,ಜೂನ್,12,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದಿದ್ದಾರೆ.

ಈ ಸಂಬಂಧ ಆಯೋಗಕ್ಕೆ ಪತ್ರ ಬರೆದಿರುವ ಆರ್.ಅಶೋಕ್,  ಜನಸಂದಣಿ ನಿರ್ವಹಣೆ ಭದ್ರತೆ ಅಗತ್ಯ ಸೌಲಭ್ಯಗಳಲ್ಲಿನ ಸ್ಪಷ್ಟ ಲೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.  ಆಯೋಗವು ತುರ್ತು ಮಧ್ಯಸ್ಥಿಕೆ ವಹಿಸುವಂತೆ ಅಶೋಕ್ ಕೋರಿದ್ದಾರೆ ಎನ್ನಲಾಗಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನ ಬಂಧಿಸಲಾಗಿದ್ದು,  ಹಲವು ಪೊಲೀಸ್ ಅಧಿಕಾರಿಗಳನ್ನ ಸರ್ಕಾರ ಅಮಾನತು ಮಾಡಿದೆ. ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ.  ಈ ಮಧ್ಯೆ ಇದೀಗ ಆರ್.ಅಶೋಕ್ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ.vtu

Key words: Stampede case,  R. Ashok, Letter, National Human Rights Commission