ಕಾಲ್ತುಳಿತದಿಂದ 11 ಸಾವು ಕೇಸ್: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದ RCB

ಬೆಂಗಳೂರು,ಆಗಸ್ಟ್,30,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು( ಆರ್ ಸಿಬಿ) ತಲಾ 25 ಲಕ್ಷ ರೂ ಪರಿಹಾರ ಘೋಷಿಸಿದೆ.

ಆರ್​ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಪ್ರತಿ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಆರ್ಥಿಕ ಸಹಾಯ ನೀಡಿರುವುದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಧಿಕೃತವಾಗಿ ಪ್ರಕಟಿಸಿದೆ.

11 ಅಭಿಮಾನಿಗಳ ಸಾವಿನ ಬೆನ್ನಲ್ಲೇ ಆರ್​ಸಿಬಿ ಕೇರ್ಸ್ ಶುರು ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಇದೀಗ ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ನೀಡಿದೆ. ಅಲ್ಲದೆ ಆರ್​ಸಿಬಿ ಕೇರ್ಸ್ ಮೂಲಕ ಮತ್ತಷ್ಟು ಸಹಾಯಹಸ್ತ ನೀಡುವ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುವ ಭರವಸೆಯನ್ನು ಸಹ ನೀಡಿದ್ದಾರೆ.

Key words: stampede case, RCB, announces, Rs 25 lakh, compensation