ಫೆ.1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯು ತರಗತಿಗಳು ಆರಂಭ…

ಬೆಂಗಳೂರು,ಜನವರಿ,28,2021(www.justkannada.in): ಫೆಬ್ರವರಿ 1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಗಳನ್ನ ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk

ವಿಧಾನಸೌಧದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವರ ಜೊತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ‌‌ ನಡೆಸಲಾಗಿದೆ. ಚರ್ಚೆಯ, ಆಧಾರದಲ್ಲಿ ಕೆಳಕಂಡ ನಿರ್ಣಯ ತೆಗೆದುಕೊಳ್ಳಲಾಗಿದೆ.

ಫೆಬ್ರವರಿ 1ರಿಂದ 9ನೇ ತರಗತಿ ಮತ್ತು ಪ್ರಥಮ ಪಿಯುಸಿ ತರಗತಿಗಳನ್ನ ಆರಂಭಿಸಲಾಗುತ್ತದೆ.  10, 12 ನೇ‌ ತರಗತಿಗೆ ಸಂಬಂಧಿಸಿದಂತೆ ಹಾಗೂ 9, 11 ನೇ ತರಗತಿಗಳು ಪೂರ್ಣ ದಿನ ನಡೆಯಲಿವೆ. 6-8 ನೇ ತರಗತಿಗಳಿಗೆ ಸಂಬಂಧಿಸಿದಂತೆ ವಿದ್ಯಾಗಮ ಮುಂದುವರೆಯಲಿವೆ. 8ನೇ ತರಗತಿ ಆರಂಭದ ಬಗ್ಗೆ ಫೆಬ್ರವರಿ 2ನೇ ವಾರದವರೆಗೆ ಕಾದು ನಿರ್ಧಾರ ಮಾಡಲಾಗುತ್ತದೆ . ಶಾಲೆಯ ವಾತಾವರಣ, ಮಕ್ಕಳ ಹಾಜರಾತಿ ಗಮನಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.start- 9th Class- PU Class – feb-1-Education Minister- Suresh Kumar

ಮುಂದಿನ ಫೆಬ್ರುವರಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ಇನ್ನೊಮ್ಮೆ ಸಭೆ ಸೇರಿ ಉಳಿದ ತರಗತಿಗಳನ್ನ ಪ್ರಾರಂಭಿಸುವ ಬಗ್ಗೆ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುತ್ತದೆ. ಆಫ್ ಲೈನ್/ಆನ್ ಲೈನ್ ಆಯ್ಕೆ‌ ಮುಂದುವರೆಯಲಿದೆ. ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದರು.

Key words: start- 9th Class- PU Class – feb-1-Education Minister- Suresh Kumar