ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ಆರಂಭ: ಸಚಿವರು, ತಜ್ಞರು ಭಾಗಿ.

ಬೆಂಗಳೂರು,ಜನವರಿ,17,2022(www.justkannada.in):  ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಭೆ ನಡೆಯುತ್ತಿದ್ದು ಸಚಿವರು, ತಜ್ಞರು ಅಧಿಕಾರಿಗಳು ಪಾಲ್ಗೊಂಡಿದ್ದಾರೆ.

ವರ್ಚುವಲ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸುತ್ತಿದ್ದು,  ಆರ್ ಟಿನಗರ ನಿವಾಸದಿಂದ ಸಿಎಂ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಶಿವಮೊಗ್ಗದಿಂದ ಗೃಹ ಸಚಿವ ಅರಗ ಜ್ಞಾನೇಂದ್ರ, ತಿಪಟೂರಿನಿಂದ ಶಿಕ್ಷಣ ಸಚಿವ ಬಿಸಿ ನಾಗೇಶ್, ಜಯನಗರ ನಿವಾಸದಿಂದ ಕಂದಾಯ ಸಚಿವ ಆರ್ ಅಶೋಕ್  ವರ್ಚೂವಲ್ ಮೂಲಕ ಭಾಗಿಯಾಗಿದ್ದಾರೆ. ಅಧಿಕಾರಿಗಳು ತಜ್ಞರು ಸಹ ಹಾಜರಿದ್ದಾರೆ.

ಇಂದಿನ ಸಭೆಯಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮುಂದುವರಿಸಬೇಕಾ ಅಥವಾ ಬೇಡವಾ ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Key words: start – emergency- meeting – CM Bommai.