ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳಕ್ಕೆ ಚಾಲನೆ

ಮೈಸೂರು. ಅಕ್ಟೋಬರ್ 15, 2023 (www.justkannada.in): ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ-2023 ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ಕನ್ನಡ ಪುಸ್ತಕ ಮಾರಾಟ ಮೇಳಕ್ಕೆ ಇಂದು ಚಾಲನೆ ದೊರೆಯಿತು.

ಮೈಸೂರು ದಸರಾ ಮಹೋತ್ಸವ -2023ರ ಅಂಗವಾಗಿ ಅಕ್ಟೋಬರ್ 23ರವರೆಗೆ ಓವಲ್ ಗ್ರೌಂಡ್’ನಲ್ಲಿ“ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ – 2023” ನಡೆಯಲಿದೆ.  ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ಎಸ್. ತಂಗಡಗಿ ಪುಸ್ತಕ ಮೇಳವನ್ನು ಉದ್ಘಾಟಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಎನ್.ಮಂಜುಳ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಧರಣಿದೇವಿ ಮಾಲಗತ್ತಿ , ಹಾಗೂ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಉಪಸ್ಥಿತರಿದ್ದರು.