Sunday, August 23, 2026

BDA Apartments

Home Front Page 2024ರಲ್ಲಿ ಮತ್ತೆ ರಾಜ್ಯ ವಿಧಾನಸಭೆ ಚುನಾವಣೆ ಖಚಿತ: ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ...

2024ರಲ್ಲಿ ಮತ್ತೆ ರಾಜ್ಯ ವಿಧಾನಸಭೆ ಚುನಾವಣೆ ಖಚಿತ: ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ರಾಮನಗರ,ಅಕ್ಟೋಬರ್,9,2023(www.justkannada.in): 2024ರಲ್ಲಿ ಮತ್ತೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲದೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಓಡುವ ಕಾಲ ಹತ್ತಿರದಲ್ಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೊಸಬಾಂಬ್ ಸಿಡಿಸಿದ್ದಾರೆ.

ನಿನ್ನೆ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ , ಈ ಸರ್ಕಾರದ ಪಾಪದ ಕೊಡ ತುಂಬುತ್ತಿದೆ. ಇಷ್ಟು ಕೆಟ್ಟ ಸರ್ಕಾರವನ್ನು ನಾನು ನೋಡಿಯೇ ಇಲ್ಲ. ಆಂತರಿಕ ಕಚ್ಚಾಟದಿಂದ ಈ ಸರ್ಕಾರ ಹೋಗುತ್ತದೆ. 2024ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ (ಡಿಕೆ ಶಿವಕುಮಾರ್) ಅಭ್ಯರ್ಥಿ ಆಗುವುದೇ ಅನುಮಾನ. ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಜೋಡೆತ್ತು ಎಂದವರು ನಡುರಸ್ತೆಯಲ್ಲಿ ಕೈ ಬಿಟ್ಟರು. ಮೈತ್ರಿ ಸರ್ಕಾರ ಪತನವಾಗಿದ್ದು ಡಿಕೆ ಶಿವಕುಮಾರ್ ರಿಂದಲೇ.  ನಮ್ಮನ್ನು ಹಾಸನಕ್ಕೆ ಓಡಿಸಬಹುದು, ಅವರು ತಿಹಾರ್ ಗೆ ಓಡುವ ಕಾಲ ಹತ್ತಿರದಲ್ಲಿ ಇದೆ. ಒಮ್ಮೆ ತಿಹಾರ್ ನೋಡಿಕೊಂಡು ಬಂದಿದ್ದಾರೆ. ಅವರು ಮತ್ತೆ ಅಲ್ಲಿಗೆ ಪರಮನೆಂಟಾಗಿ ಹೋದರೂ ಅಚ್ಚರಿ ಅಲ್ಲ ಎಂದು ಲೇವಡಿ ಮಾಡಿದರು.

ನಾವು ಮೈತ್ರಿ ಧರ್ಮ ಪಾಲಿಸಿದವು ನಮಗೆ ದ್ರೋಹ ಬಗೆದರು.  ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಗೆ ಮೋಸ ಮಾಡಿದ್ರು. ನಾವು ಇಲ್ಲಿ ಅವರಂತೆ ಮಾಡಿದ್ರೆ ಆ ವ್ಯಕ್ತಿಯ ಕಥೆ ಅಂದೇ ಮುಗಿದು ಹೋಗುತ್ತಿತ್ತು ಎಂದು ಪರೋಕ್ಷವಾಗಿ ಸಂಸದ ಡಿ.ಕೆ ಸುರೇಶ್ ರಿಗೆ ಕುಟುಕಿದರು.

Key words: State -assembly –election- again – 2024 -Former CM- HD Kumaraswamy.