ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ: ಸಿಎಂ ಬೊಮ್ಮಾಯಿ ಜಿಲ್ಲಾ ಪ್ರವಾಸ ರದ್ದು.

ಬೆಂಗಳೂರು,ಮಾರ್ಚ್,29,2023(www.justkannada.in): ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ಕೇಂದ್ರ ಚುನಾವಣಾ ಆಯೋಗ ಇಂದು ಸುದ‍್ಧಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಲಿದೆ.

ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಕೈಗೊಂಡಿದ್ದ ಕೊಪ್ಪಳ ಹಾವೇರಿ ಜಿಲ್ಲಾ ಪ್ರವಾಸ ರದ್ಧಾಗಿದೆ.  ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ಧಾಗಿವೆ.

ಇಂದು ಸಿಎಂ ಬೊಮ್ಮಾಯಿ ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೇ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ನೀಡಬೇಕಿತ್ತು. ಶಿಗ್ಗಾಂವಿ ರಾಣೆಬೆನ್ನೂರಿನಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ಧಾಗಿದೆ.

Key words: State -assembly –election- announcement – today- CM Bommai – tour -cancelled.