Friday, August 14, 2026

BDA Apartments

Home Front Page ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಮತದಾನ: ಮೈಲಾಕ್ ನಿಂದ 1.20 ಲಕ್ಷ ಬಾಟಲ್ ಅಳಿಸಲಾಗದ ಶಾಯಿ...

ನಾಳೆ ರಾಜ್ಯ ವಿಧಾನಸಭಾ ಚುನಾವಣೆ ಮತದಾನ: ಮೈಲಾಕ್ ನಿಂದ 1.20 ಲಕ್ಷ ಬಾಟಲ್ ಅಳಿಸಲಾಗದ ಶಾಯಿ ಪೂರೈಕೆ

ಮೈಸೂರು ,ಮೇ,9,2023(www.justkannada.in): ನಾಳೆ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು ಚುನಾವಣಾ ಆಯೋಗ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ವೋಟಿಂಗ್ ಮಾಡಿದ ಬಳಿಕ ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುತ್ತದೆ. ಈ ಅಳಿಸಲಾಗದ ಶಾಯಿಯನ್ನ ಮೈಸೂರಿನಿಂದ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ಮೇ 10ರಂದು ನಾಳೆ ನಡೆಯಲಿರುವ ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮೈಸೂರಿನ ಕಪ್ಪು ಶಾಯಿ ರವಾನೆಯಾಗಿದೆ. ಚುನಾವಣಾ ಆಯೋಗದ ಬೇಡಿಕೆ ಹಿನ್ನೆಲೆ 1 ಲಕ್ಷದ 20 ಸಾವಿರ ಬಾಟಲ್ ಪೂರೈಕೆ ಮಾಡಲಾಗಿದೆ.

1937 ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್  ಅವರು ಮೈಸೂರು ಪೇಂಟ್ಸ್  ಮತ್ತು ವಾರ್ನಿಷ್  ಕಾರ್ಖಾನೆ ಆರಂಭಿಸಿದ್ದರು. ನಂತರ 1962ರಲ್ಲಿ ಅಳಿಸಲಾಗದ ಶಾಯಿ ತಯಾರಿಕೆ ಆರಂಭವಾಗಿತ್ತು. ಸ್ವಾತಂತ್ರ್ಯ ನಂತರದ ಎಲ್ಲಾ ಸಾರ್ವತ್ರಿಕ ಚುನಾವಣೆಗಳಿಗೂ ಇಲ್ಲಿದಂಲೇ ಶಾಯಿ ಪೂರೈಕೆಯಾಗುತ್ತಿದೆ.

Key words: State- assembly –election-mysore- supplies -1.20 lakh -bottles – indelible ink