ಮುನ್ನಡೆಯಲ್ಲಿ ಶತಕದ  ಬಾರಿಸಿದ ಕಾಂಗ್ರೆಸ್ : ಯಾರು ಯಾರಿಗೆ ಮುನ್ನಡೆ ಇಲ್ಲಿದೆ ಮಾಹಿತಿ.

ಬೆಂಗಳೂರು,ಮೇ,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ  ಫಲಿತಾಂಶ ಪ್ರಕಟವಾಗುತ್ತಿದ್ದು ಕಾಂಗ್ರೆಸ್ 103 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಮುನ್ನಡೆಯಲ್ಲಿ ಕಾಂಗ್ರೆಸ್ ಶತಕ ಬಾರಿಸಿದೆ.

ಕಾಂಗ್ರೆಸ್ 101 ಕ್ಷೇತ್ರಗಳಲ್ಲಿ,  ಬಿಜೆಪಿ 77 ಕ್ಷೇತ್ರಗಳಲ್ಲಿ,  ಜೆಡಿಎಸ್ 25 ಕ್ಷೇತ್ರಗಳಲ್ಲಿ,  ಇತರೇ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನು ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ ಕೋಟೆಯಲ್ಲಿ ಅನಿಲ್ ಚಿಕ್ಕಮಾದು, ಟಿ.ನರಸೀಪುರದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ ಮಹದೇವಪ್ಪ ಮುನ್ನಡೆ ಸಾಧಿಸಿದ್ದಾರೆ.

ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯ  ಮುನ್ನಡೆ ಸಾಧಿಸಿದ್ದಾರೆ. ಸಚಿವ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ಅಭ್ಯರ್ಥಿ ನಾಗೆಂದ್ರ 1348 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ರಾಜಾಜಿನಗರದಲ್ಲಿ ಸುರೇಶ್ ಕುಮಾರ್ ಗೆ ಹಿನ್ನಡೆ. ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆಗೆ ಹಿನ್ನಡೆ. ಚಾಮರಾಜನಗರದಲ್ಲಿ ಸಚಿವ ವಿ.ಸೋಮಣ್ಣ 4 ಸಾವಿರ ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದ್ದಾರೆ.

ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅಭ್ಯರ್ಥಿ ಜನಾರ್ದನರೆಡ್ಡಿಗೆ ಮುನ್ನಡೆ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಮುನ್ನಡೆ

ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ ಮುನ್ನಡೆ

ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಹಿನ್ನಡೆ

ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರುಗೇಶ್ ನಿರಾಣಿಗೆ ಹಿನ್ನಡೆ.

Key words: State Assembly -Election -Vote Counting- Congress –bjp-jds