Tuesday, September 29, 2026

BDA Apartments

ರಾಜ್ಯ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ BDA JK_Adv BDA Adv
Home Front Page ರಾಜ್ಯ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ..

ರಾಜ್ಯ ವಿಧಾನಸಭಾ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ..

ಬೆಂಗಳೂರು,ಮೇ,8,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಒಂದು ದಿನವಷ್ಟೇ ಬಾಕಿ ಇದ್ದು ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಮೇ 10 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಯಾವುದೇ ಸಭೆ ಸಮಾರಂಭ ಉತ್ಸವ  ರ್ಯಾಲಿಗಳನ್ನ ನಡೆಸುವಂತಿಲ್ಲ. ಅಭ್ಯರ್ಥಿಗಳು ಸೇರಿ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಬಹುದಾಗಿದೆ. ಅಭ್ಯರ್ಥಿ ಹೊರತುಪಡಿಸಿ ಬೇರೆ ಕ್ಷೇತ್ರದ ವ್ಯಕ್ತಿಗಳು ಇರುವಂತಿಲ್ಲ. ಕ್ಷೇತ್ರದ ಹೊರಗಿನವರು ಬಂದು ಪ್ರಚಾರ ಮಾಡುವಂತಿಲ್ಲ. ಧ್ವನಿವರ್ಧಕ ಬಳಕೆ ಮಾಡುವಂತಿಲ್ಲ.ರಾಜ್ಯ ವಿಧಾನಸಭಾ ಚುನಾವಣೆ election election 1

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಮದ್ಯ ಮಾರಾಟವನ್ನ ನಿಷೇಧೀಸಲಾಗಿದೆ.  ಮೇ 10ರವರೆಗೆ ಮತದಾನ ಮುಗಿಯುವವರೆ ಮದ್ಯ ಮಾರಾಟವನ್ನ ನಿಷೇಧ ಮಾಡಲಾಗಿದೆ. ಈ ನಡುವೆ ಮೇ 10 ರಂದು  ರಾಜ್ಯದಲ್ಲಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಸಜ್ಜಾಗಿದ್ದಾರೆ.

Key words: State- Assembly -Elections: – open campaigning-bandh