ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ.ಜುಲೈ.28,2025 (www.justkannada.in): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 01 ರಂದು ರಾಜ್ಯ ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ನೀಡಲು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯುಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.

ಅರ್ಜಿಯನ್ನು ಆಗಸ್ಟ್ 25 ರೊಳಗೆ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ ಕಛೇರಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ: 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.vtu

Key words: World Senior Citizens, Day, Applications, invited, state awards