ಬೆಂಗಳೂರು ಬಿಜೆಪಿ ಕಚೇರಿಗೆ ಆಗಮಿಸಿದ ಅರುಣ್ ಸಿಂಗ್: ನೂತನ ಸಿಎಂ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಜುಲೈ,27,2021(www.justkannada.in): ಹೈಕಮಾಂಡ್ ನಿರ್ದೇಶನದಂತೆ ಕರ್ನಾಟಕ ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಮಾಡಲಾಗುತ್ತದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.jk

ರಾಜ್ಯದ ನೂತನ ಸಿಎಂ ಆಯ್ಕೆ ಸಂಬಂಧ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು ಸಭೆಯಲ್ಲಿ ಪಾಲ್ಗೊಳ್ಳಲು ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಅರುಣ್ ಸಿಂಗ್ ಆಗಮಿಸಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅರುಣ್ ಸಿಂಗ್,  ಸಂಸದೀಯ ಮಂಡಳಿ ನಿರ್ದೇಶನದಂತೆ ನೂತನ ಸಿಎಂ ಆಯ್ಕೆ ಮಾಡಲಾಗುತ್ತದೆ. ವೀಕ್ಷಕರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರಡ್ಡಿ ಬಂದ ಬಳಿಕ ಸಭೆ ನಡೆಸಲಾಗುತ್ತದೆ. ಸಭೆಯಲ್ಲಿ  ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ ಎಂದರು.

 ಇದಕ್ಕೂ ಮುನ್ನ ಕೆಐಎಬಿಯಲ್ಲಿ ಅರುಣ್ ಸಿಂಗ್, 2 ವರ್ಷಗಳ ಕಾಲ ಬಿ.ಎಸ್. ಯಡಿಯೂರಪ್ಪ ಉತ್ತಮ ಆಡಳಿತ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ ಮಾರ್ಗದರ್ಶನ, ಸಹಕಾರದಿಂದ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು ಎಂದು ಹೇಳಿದರು.

Key words: state- bjp-incharge-Arun Singh- arrives – Bangalore-new CM