Friday, August 21, 2026

BDA Apartments

Home Front Page ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು

ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು

ಮೈಸೂರು, ಜುಲೈ 12, 2020 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿರುಗೇಟು ನೀಡಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ವ್ಯಾಪಿಸುವುದನ್ನು ತಡೆಯಲು ರಾಜ್ಯ ಸರಕಾರ ಕೈಗೊಂಡ ಕಾರ್ಯಗಳ ಬಗ್ಗೆ ಆರೋಪ ಮಾಡಿರುವ ಸಿದ್ದರಾಮಯ್ಯಗೆ ನಳಿನ್ ಕುಮಾರ್ ಟಾಂಗ್ ನೀಡಿದ್ದಾರೆ.

ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಸಿದ್ದರಾಮಯ್ಯ ಅವರ ಆರೋಪಕ್ಕೆ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ನಿಮಗಿರುವ ಸಂಶಯಗಳ ಬಗ್ಗೆ ಎಲ್ಲ ಮಾಹಿತಿ ನೀಡಿ, ನಾವು ಉತ್ತರ ಕೊಡುತ್ತೇವೆ ಎಂದು ತಿಳಿಸಿರುವುದಾಗಿ ಹೇಳಿದರು.