ರಾಜ್ಯ ಬಜೆಟ್: ಕೂಡಲಸಂಗಮದಲ್ಲಿ ವಚನಗಳ ವಿವಿ ಸ್ಥಾಪನೆ ಕುರಿತು ಘೋಷಣೆಗೆ ಒತ್ತಾಯ.

ಬೆಳಗಾವಿ, ಫೆಬ್ರವರಿ,15,2024(www.justkannada.in):  ನಾಳೆ ಸಿಎಂ ಸಿದ್ದರಾಮಯ್ಯ ಅವರು  ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಕೂಡಲಸಂಗಮದಲ್ಲಿ ವಚನಗಳ ವಿಶ್ವ ವಿದ್ಯಾನಿಲಯ ಸ್ಥಾಪನೆ ಮಾಡುವ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡಬೇಕು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಬಸವಣ್ಣ ಅವರು ಲಿಂಗೈಕ್ಯೆ ಆಗಿದ್ದು ಕೂಡಲಸಂಗಮದಲ್ಲಿ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ‌ ಮಾಡಿಕೊಳ್ಳುತ್ತೇನೆ. ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಘೋಷಣೆ ಮಾಡಬೇಕು. ಕೂಡಲಸಂಗಮದಲ್ಲಿ ವಚನಗಳ ವಿಶ್ವವಿದ್ಯಾಲಯ ಸ್ಥಾಪನೆ ಆಗಬೇಕು. ನಾಳಿನ ಬಜೆಟ್ ಅಧಿವೇಶನದಲ್ಲಿ ಈ ಕುರಿತು ಘೋಷಣೆ ಆಗಲಿ ಎಂದು ಆಗ್ರಹಿಸಿದರು.

ಇನ್ನೂ ಕೂಡಲಸಂಗಮ ಅಭಿವೃದ್ಧಿ ಆಗಿಲ್ಲ. ಬೆಳಗಾವಿಯ ಬೆಳವಡಿ ಮಲ್ಲಮ್ಮನ‌ ಹೆಸರಿನಲ್ಲಿ ಪ್ರಾಧಿಕಾರ ರಚನೆಯಾಗಬೇಕು. ಫೆಬ್ರವರಿ 27, 28 ರಂದು ಬೆಳವಾಡಿಯಲ್ಲಿ ಮಲ್ಲಮ್ಮನ ಉತ್ಸವ ಇದೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರಾಧಿಕಾರ ಘೋಷಣೆ ಮಾಡಿ ಉತ್ಸವದಲ್ಲಿಯೇ ಲೋಕಾರ್ಪಣೆ ಮಾಡಬೇಕು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು.

Key words: State Budget-Basava jaya mrutyunjaya swamiji- Establishment – Vachana University -Kudalasangam.