Thursday, August 6, 2026

BDA Apartments

Home Front Page ಜ.31 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್…?

ಜ.31 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್…?

ಬೆಂಗಳೂರು,ಜ,28,2020(www.justkannada.in): ಸಿಎಂ ಬಿಎಸ್ ಯಡಿಯೂರಪ್ಪಗೆ ಕಗ್ಗಂಟಾಗಿ ಪರಿಣಮಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಜನವರಿ 31ರಂದು ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಜತೆ  ಸಿಎಂ ಬಿಎಸ್ ಯಡಿಯೂರಪ್ಪ  ಚರ್ಚೆ ನಡೆಸಿದ್ದಾರೆ.  ಸಂಪುಟ ವಿಸ್ತರಣೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ದೆಹಲಿಗೆ ಹೋಗಬೇಕೋ ಅಥವಾ ಫೋನ್ ನಲ್ಲೇ ಮಾತನಾಡಿ ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ ಹಾಕಿಸಬೇಕೋ ಎಂಬುದನ್ನ ಸಿಎಂ ಬಿಎಸ್ ವೈ ನಾಳೆ ನಿರ್ಧರಿಲಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಲೇ ಬೇಕಾದರೇ  ಗುರವಾರ(ಜ.30) ರಂದು ತಾವು ಸಿದ್ಧಪಡಿಸಿರುವ ಪಟ್ಟಿಯೊಂದಿಗೆ ದೆಹಲಿಗೆ ಹೋಗಲಿದ್ದು  ಈ ವೇಳೆ ಅಮಿತ್ ಶಾ ಜತೆ ಚರ್ಚಿಸಿ ಸಚಿವರ ಪಟ್ಟಿಗೆ ಒಪ್ಪಿಗೆ ಪಡೆಯುವ ಸಾಧ್ಯತೆ ಇದೆ.  ಇನ್ನು ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬಿದ್ದರೇ ಶುಕ್ರವಾರ ಸಚಿವ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.

Key words: State -Cabinet expansion- fix – Jan. 31-cm bs yeddyurappa