ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ಬಗ್ಗೆ ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದ್ದು ಹೀಗೆ.

ಬೆಂಗಳೂರು,ಜೂನ್,16,2021(www.justkannada.in):  ರಾಜ್ಯ ಬಿಜೆಪಿ ಶಾಸಕರು, ಸಚಿವರ ಜತೆ ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದು ಈ ಕುರಿತು ರಾಜ್ಯ ಕಾಂಗ್ರೆಸ್ ಲೇವಡಿ ಮಾಡಿದೆ.jk

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ , ಅರುಣ್ ಸಿಂಗ್ ಅವರೇ ‘ಕಟ್ಟೆ ಪಂಚಾಯ್ತಿ’ ನಡೆಸಲು ಓಡೋಡಿ ಬರುವ ತಾವು, ಜನರ ಸಮಸ್ಯೆಗಳ ಬಗ್ಗೆ ಚಿಂತನೆ ನಡೆಸಲು ಸಮಯವಿಲ್ಲವೇ?

ಈ ಗತಿಗೆಟ್ಟ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಆಂತರಿಕ ಕಿತ್ತಾಟಗಳೇ ಸುದ್ದಿ ಮಾಡುತ್ತಿವೆ ಹೊರತು ಸಾಧನೆಗಳಲ್ಲ. ಈ ದುರಾಡಳಿತದ ಬಗ್ಗೆ ತಮಗೆ ಕನಿಷ್ಠ ವಿಷಾದ, ನಾಚಿಕೆ ಯಾವುದೂ ಇಲ್ಲವೇ? ಎಂದು ಕಿಡಿಕಾರಿದೆ.

ರಾಜ್ಯ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವಾಗ  ಬಿಜೆಪಿ ಪಕ್ಷದ ಆಂತರಿಕ ಕಲಹ ತಾರಕಕ್ಕೇರಿದೆ. ಬೆಲೆ ಏರಿಕೆ, ನಿರುದ್ಯೋಗ, ಕರೋನಾ 3ನೇ ಅಲೆ, ಬ್ಲಾಕ್ ಫಂಗಸ್, ರೈತರ ಸಂಕಷ್ಟ, ಆರ್ಥಿಕ ಕುಸಿತಗಳ ಬಗ್ಗೆ ಚಿಂತಿಸಲು ಸಮಯವಿಲ್ಲದ ಬೇಜವಾಬ್ದಾರಿ ಬಿಜೆಪಿ ಸರ್ಕಾರಕ್ಕೆ ಕುರ್ಚಿ ಕದನ ನಡೆಸಲು ಮಾತ್ರ ಭರಪೂರ ಸಮಯವಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.

Key words:  state Congress –bjp-incharge-Arun Singh’s- visit