ಕೇಂದ್ರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ: ನಮ್ಮ ಹಕ್ಕು ಕೇಳುತ್ತಿದ್ದೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ.

ನವದೆಹಲಿ,ಫೆಬ್ರವರಿ,7,2024(www.justkannada.in):  ರಾಜ್ಯಕ್ಕೆ ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ  ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದೆ.

ಕೆಲವೇ ಹೊತ್ತಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆರಂಭವಾಗಲಿದೆ. ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಕೆ.ಶಿವಕುಮಾರ್, ಸಚಿವರು, ಶಾಸಕರು, ರಾಜ್ಯಸಭಾ ಸದಸ್ಯರು, ಯೂಥ್ ಕಾಂಗ್ರೆಸ್ ಮುಖಂಡರು ಭಾಗಿಯಾಗಲಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ,  ನಮ್ಮ ಹಕ್ಕು ಕೇಳಲು ದೆಹಲಿಗೆ ಬಂದಿದ್ದೇವೆ. ಯಾವುದೇ  ಸಂಘರ್ಷ ಮಾಡಲು ಇಲ್ಲಿಗೆ ಬಂದಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ  ಮಾಡುತ್ತಿಲ್ಲ. ನಮ್ಮ ಹಕ್ಕು ಕೇಳುತ್ತಿದ್ದೇವೆ ಎಂದರು.

Key words: State- Congress- protest -against – Centre-Minister -Satish Jarakiholi.