Wednesday, August 19, 2026

BDA Apartments

Home Front Page ವಿಜ್ಞಾನ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ...

ವಿಜ್ಞಾನ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿ…

ಬೆಂಗಳೂರು,ಜ,3,2020(www.justkannada.in): ವಿಜ್ಞಾನ ಕ್ಷೇತ್ರಕ್ಕೆ ರಾಜ್ಯದಿಂದ ಅಪಾರ ಕೊಡುಗೆ ನೀಡಲಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನ ಜಿಕೆ ವಿಕೆ ಮೈದಾನದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನ ನಡೆಯುತ್ತಿದ್ದು ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಸಮ್ಮೇಳನದ ಅಧ್ಯಕ್ಷ ಕೆ.ಎಸ್ ರಂಗಪ್ಪ, ಕೇಂದ್ರ ಸಚಿವ ಹರ್ಷವರ್ದನ್ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಚಾಲನೆಗೂ ಮುನ್ನ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕರ್ನಾಟಕ ವಿಜ್ಞಾನ ತಂತ್ರಜ್ಞಾನಕ್ಕೆ ಹೆಬ್ಬಾಗಿಲು. ವಿಜ್ಞಾನ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ. ರಾಜ್ಯದಲ್ಲಿ ವಿಜ್ಞಾನ ಕ್ಷೇತ್ರ ಮತ್ತಷ್ಟು ಅಭಿವೃದ್ಧಿ ಮಾಡಲು ಆದ್ಯತೆ ನೀಡಲಾಗುತ್ತದೆ. ಗ್ರಾಮೀಣಾಭಿವೃದ್ಧಿ ವಿಜ್ಞಾನ ತಂತ್ರಜ್ಞಾನಕ್ಕೆ ಕರ್ನಾಟಕ ಸೂಕ್ತವಾದದ್ದು.  ಆರೋಗ್ಯ ಕೃಷಿ ಕ್ಷೇತ್ರಕ್ಕೆ ವಿಜ್ಞಾನದ ಅಗತ್ಯತೆ ಇದೆ ಎಂದು ಹೇಳಿದರು.

key words: state- contribution – field –science- CM BS Yeddyurappa – Indian Science Congress conference-bangalore