Sunday, August 16, 2026

BDA Apartments

Home Front Page ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆ, ನೂರಕ್ಕೆ ನೂರರಷ್ಟು ಬಿಜೆಪಿ ಗೆಲುವು : ಸಿಎಂ ಬಿ.ಎಸ್.ವೈ ವಿಶ್ವಾಸ

ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆ, ನೂರಕ್ಕೆ ನೂರರಷ್ಟು ಬಿಜೆಪಿ ಗೆಲುವು : ಸಿಎಂ ಬಿ.ಎಸ್.ವೈ ವಿಶ್ವಾಸ

ಬೆಂಗಳೂರು,ಫೆಬ್ರವರಿ,28,2021(www.justkannada.in)  : ನೂರಕ್ಕೆ ನೂರರಷ್ಟು ರಾಜ್ಯದ ನಾಲ್ಕು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

jk

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ, ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ ,ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ಮುಖಂಡರು ನೋಡಿಕೊಳ್ಳುತ್ತಾರೆ ಎಂದಿದ್ದಾರೆ.

 state-four fields-By-election-Per hundred-Hundreds-BJP-Win-CM B.S.Y-Confidence

ಮಸ್ಕಿ, ಬಸವಕಲ್ಯಾಣ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದೇ ಗೆಲ್ಲಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಉಪಚುನಾವಣೆ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಮುಂದಿನ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಎಲ್ಲ ಚರ್ಚೆ ಮುಗಿದಿದೆ ಎಂದು ತಿಳಿಸಿದರು.

 

key words :  state-four fields-By-election-Per hundred-Hundreds-BJP-Win-CM B.S.Y-Confidence