Monday, October 26, 2026

Dasara Wishes

Happy Dasara
Home Front Page ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

ಅನುದಾನರಹಿತ ಶಾಲಾ ಶಿಕ್ಷಕರು, ಸಿಬ್ಬಂದಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

ಬೆಂಗಳೂರು, ಆಗಸ್ಟ್ 1, 2021 (www.justkannada.in): ರಾಜ್ಯ ಸರಕಾರ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಿದೆ.

2021-22 ನೇ ಸಾಲಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

2021-22 ನೇ ಸಾಲಿಗೆ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ. ರಂತೆ ಒಟ್ಟಾರೆಯಲ್ಲಿ 10,347.25 ಲಕ್ಷಗಳ ಅನುದಾನವನ್ನು ಕೋವಿಡ್ 19 ವಿಶೇಷ ಪ್ಯಾಕೇಜ್ ಪರಿಹಾರ ಧನವಾಗಿ ಬಿಡುಗಡೆಗೊಳಿಸಲು ಆದೇಶಿಸಲಾಗಿದೆ.