Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಸರ್ಕಾರಿ ಕಾರ್ಯಕ್ರಮಗಳಲ್ಲಿ  ಹಾರ, ಶಾಲು,ಪೇಟ, ನೆನಪಿನ ಕಾಣಿಕೆ ನೀಡುವುದನ್ನ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ.

ಸರ್ಕಾರಿ ಕಾರ್ಯಕ್ರಮಗಳಲ್ಲಿ  ಹಾರ, ಶಾಲು,ಪೇಟ, ನೆನಪಿನ ಕಾಣಿಕೆ ನೀಡುವುದನ್ನ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು,ಆಗಸ್ಟ್,10.2021(www.justkannada.in): ಸರ್ಕಾರದ ಸಭೆ -ಸಮಾರಂಭಗಳಲ್ಲಿ ಹೂಗುಚ್ಚ, ಹಾರ,  ಹಣ್ಣಿನ ಬುಟ್ಟಿ, ಶಾಲು, ಪೇಟ, ನೆನಪಿನ ಕಾಣಿಕೆ ನೀಡುವುದನ್ನ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ – ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು. ಈ ಸಂಬಂಧ ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್  ಸುತ್ತೋಲೆ ಹೊರಡಿಸಿದ್ದು, ಕನ್ನಡ ಪುಸ್ತಕ ನೀಡಲು ಅನುಮತಿಸಲಾಗಿದೆ.

ಈ ನಿರ್ದೇಶನವನ್ನು ಚಾಚು ತಪ್ಪದೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಸರ್ಕಾರದ ಎಲ್ಲಾ ಇಲಾಖೆಗಳ ಮತ್ತು ರಾಜ್ಯ ಸರ್ಕಾರದ ಸ್ವಾಮ್ಯಕ್ಕೊಳಪಡುವ ಎಲ್ಲಾ ಸಂಸ್ಥೆಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.

Key words:  state government -banned –shalu-peta- gift -government programs.