‘ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆ’ ರದ್ದುಗೊಳಿಸಿದ ರಾಜ್ಯ ಸರ್ಕಾರ.

ಬೆಂಗಳೂರು, ಮಾರ್ಚ್​,8,2024(www.justkannada.in): 2021ರಲ್ಲಿ ಪ್ರಾರಂಭಿಸಲಾಗಿದ್ದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.

ಹಿಂದಿನ ಬಿಜೆಪಿ ಸರ್ಕಾರ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ 2021ರಂದು ಅನುಮತಿ ನೀಡಿತ್ತು. ಆದರೆ  ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಅನುಮತಿಯನ್ನು ಹಿಂಪಡೆದುಕೊಂಡಿದೆ.

ಬಿಎಂಆರ್​ಸಿಎಲ್ ಎಂಡಿ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯ ವರದಿಯಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯು ಮೋಟಾರ್ ವಾಹನ ಕಾಯ್ದೆಗೆ ಪೂರಕವಾಗಿಲ್ಲ ಎಂದು ತಿಳಿಸಿದೆ. ಹೀಗಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ವಿರುದ್ದ ಆಟೋ ,ಟ್ಯಾಕ್ಸಿ, ಮ್ಯಾಕ್ಸಿ, ಕ್ಯಾಬ್ ಚಾಲಕರು ಸಿಡಿದೆದ್ದು ಬೃಹತ್ ಹೋರಾಟ ನಡೆಸಿದ್ದರು. ಇದು ಮಹಿಳೆಯರಿಗೆ ಅಸುರಕ್ಷಿತವಾದ ಯೋಜನೆ ಅಂತಾ ಹೇಳಲಾಗಿತ್ತು. ಸದ್ಯ ಈಗ ಕಾಂಗ್ರೆಸ್ ಸರ್ಕಾರ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ರದ್ದುಗೊಳಿಸಿ ಆದೇಶ ಹೊರಡಿಸಿದೆ.

Key words: state government -canceled – electric bike- taxi -scheme.