ಕೇಂದ್ರ ಸರ್ಕಾರ ಪರಿಹಾರ ಕೊಡದಿದ್ರೂ ರಾಜ್ಯ ಸರ್ಕಾರ ಕೈಕಟ್ಟಿ ಕೂರಿಲ್ಲ-ಟೀಕಾಕಾರರಿಗೆ ಬೆಳಗಾವಿಯಲ್ಲಿ ಟಾಂಗ್ ಕೊಟ್ಟ ಸಿಎಂ ಬಿಎಸ್ ಯಡಿಯೂರಪ್ಪ…

ಬೆಳಗಾವಿ,ಅ,3,2019(www.justkannada.in):  ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ಕೊಡದಿದ್ರೂ ರಾಜ್ಯ ಸರ್ಕಾರ ಕೈ ಕಟ್ಟಿ ಕುಳಿತಿಲ್ಲ. ರಾಜ್ಯ ಸರ್ಕಾರದಿಂದ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಟೀಕಾಕಾರರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದರು.

ಪ್ರವಾಹ ಪೀಡಿತ ಜಿಲ್ಲೆಗಳಿಗೆ ನಾಲ್ಕು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಳಗಾವಿ ಜಿಲ್ಲೆಗೆ ಆಗಮಿಸಿದರು. ಬೆಳಗಾವಿ ಸಾಂಬ್ರಾ ನಿಲ್ದಾಣದಲ್ಲಿ ಇಂದು ಮಾತನಾಡಿದ ಸಿಎಂ ಬಿ.ಎಸ್ ಯಡಿಯೂರಪ್ಪ, ನೆರೆ ಸಂತ್ರಸ್ತರ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದೆ. ರಾಜ್ಯ ಸರ್ಕಾರದಿಂದ 3,500 ಕೋಟಿ ರೂ ನೀಡಿದ್ದೇವೆ.  ಮನೆ ಕಳೆದುಕೊಂಡವರಿಗೆ  1 ಲಕ್ಷ ನೀಡಲಾಗಿತ್ತಿದ್ದು 10 ಸಾವಿರ ರೂ. ಚೆಕ್ ವಿತರಿಸಿದ್ದೇವೆ ಎಂದು ತಿಳಿಸಿದರು.

ಪರಿಹಾರ ವಿತರಣೆ ಬಗ್ಗೆ  ಬೆಳಗಾವಿಯಲ್ಲಿ ಅಧಿಕಾರಿಗಳ ಜತೆ  ಸಭೆ ನಡೆಸುತ್ತೇನೆ. ಪರಿಹಾರ ವಿತರಣೆ ಆದ ಬಗ್ಗೆ ಚರ್ಚಿಸಿ ಸವಿಸ್ತಾರ ಮಾಹಿತಿ ಪಡೆಯುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಗೋಕಾಕ್ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಸಿಎಂಗೆ ಮನವಿ…

ಬೆಳಗಾವಿಯ ಸಾಂಬ್ರಾ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ  ಗೋಕಾಕ್ ತಾಲ್ಲೂಕನ್ನ ಪ್ರತ್ಯೇಕ ಜಿಲ್ಲೆಯಾಗಿ ಮಾಡುವಂತೆ ಅಲ್ಲಿನ ಸ್ಥಳೀಯರು ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಗೋಕಾಕ್ ಜಿಲ್ಲೆಯ ಋಣದಲ್ಲಿದೆ. ಹೀಗಾಗಿ ಮೊದಲು ಗೋಕಾಕ್ ಜಿಲ್ಲೆಯಾಗಿ ಘೋಷಣೆ ಮಾಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮುಂದೆಯೇ ಘೋಷಣೆ ಕೂಗಿದರು.

Key words: state government -central government –flood relief- CM BS Yeddyurappa-belagavi