ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ….

ಬೆಂಗಳೂರು,ಅ.19,2019(www.justkannada.in):  ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ  ಸರ್ಕಾರ ದೀಪಾವಳಿ ಹಬ್ಬದ ಗಿಫ್ಟ್ ನೀಡಿದೆ.

ರಾಜ್ಯ ಸರ್ಕಾರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ತುಟಿಭತ್ಯೆ ದರವನ್ನು ಪರಿಷ್ಕರಿಸಿದ್ದು,  ಮೂಲ ವೇತನದ ಶೇ.6.50ಯಿಂದ ಶೇ.11.25ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದ ಶೇ.4.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದಂತಾಗಿದೆ.

ರಾಜ್ಯದ ಸರ್ಕಾರದ ಎಲ್ಲಾ ಜಿಲ್ಲಾ ಪಂಚಾಯ್ತಿ, ಪೂರ್ಣಾವಧಿ ನೌಕರರು, ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಗಳಲ್ಲಿ,ವ ವಿವಿಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ಈ ಆದೇಶ ಅನ್ವಯವಾಗಲಿದೆ.

Key words: State Government-Employees- increase- Tip allowance