ಪತ್ರಿಕಾ ವಿತರಕರ ಶ್ರಮ ಗುರುತಿಸಿ ಗೌರವಿಸಿದ ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ.

 ಬೆಂಗಳೂರು ಅಕ್ಟೋಬರ್, 31,2023(www.justkannada.in):  ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪತ್ರಿಕಾ ವಿತರಕರನ್ನೂ ರಾಜ್ಯೋತ್ಸವ ಪ್ರಶಸ್ತಿಗಾಗಿ ಪರಿಗಣಿಸಿ ಗೌರವಿಸಲಾಗಿದೆ.

ಮಾಧ್ಯಮ ಕ್ಷೇತ್ರದ ಅವಿಭಾಜ್ಯ ಅಂಗವಾಗಿರುವ ಪತ್ರಿಕಾ ವಿತರಕಾ ಸಮುದಾಯದಿಂದ ಜವರಪ್ಪ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಇಡೀ ವಿತರಕ ಸಮುದಾಯವನ್ನು, ಈ ಸಮುದಾಯದ ಕಾರ್ಯಕ್ಷಮತೆ ಮತ್ತು ಶ್ರಮವನ್ನು ರಾಜ್ಯ ಸರ್ಕಾರ ಮತ್ತು ಆಯ್ಕೆ ಸಮಿತಿ ಗುರುತಿಸಿದೆ, ಗೌರವಿಸಿದೆ.

ತುಮಕೂರಿನಲ್ಲಿ ಇತ್ತೀಚಿಗೆ ಜರುಗಿದ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ್ದ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು, “ರಾಜ್ಯ ಸರ್ಕಾರದ ಪ್ರಶಸ್ತಿಗಳಲ್ಲಿ ಪತ್ರಿಕಾ ವಿತರಕರನ್ನೂ ಪರಿಗಣಿಸಲಾಗುವುದು” ಎನ್ನುವ ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

Key words: State Government – Selection -Committee -recognized – hard work – press distributors.

ENGLISH SUMMARY…

Government and Selection Committee recognise hard work of Newspaper distributors

Bengaluru, October 31: Newspaper distributor’s hard work has been recognized and honoured for the first time in the State’s history.

Newspaper distribution is an integral part of Media. Javarappa, from the newspaper distribution community has been selected for the Rajyothsava Award. Thereby, the entire distributor community’s hard work has been recognized by the Government and the selection committee.

It can be recalled that K.V. Prabhakar, CM’s Media Advisor had assured that the Newspaper Distributors would be considered for Rajyothsava Awards in the recently held Newspaper Distributor’s State Conference.