ಲಾಕ್‍ಡೌನ್ ಸಡಿಲಿಕೆ ರಾಜ್ಯ ಸರ್ಕಾರ ಆತುರದ ನಿರ್ಧಾರ: ಹೆಚ್.ಕೆ. ಕುಮಾರಸ್ವಾಮಿ

ಬೆಂಗಳೂರು, ಮೇ 04, 2020 (www.justkannada.in): ರಾಜ್ಯದಲ್ಲಿ ಲಾಕ್‍ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ಆತುರದ ನಿರ್ಧಾರ ಕೈಗೊಂಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆರೋಪಿಸಿದರು.

ಸರ್ಕಾರದ ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಇದರಿಂದ ಜನರ ನೆಮ್ಮದಿ ಕೆಡಿಸಿದಂತಾಗಿದೆ. ಮದ್ಯ ಮಾರಾಟ ಮತ್ತು ಲಾಕ್‍ಡೌನ್ ಸಡಿಲಿಕೆಯಿಂದ ಅಪಾಯ ಹೆಚ್ಚಾಗುವ ಸಾದ್ಯತೆಗಳು ಇವೆ ಎಂದು ಹೇಳಿದ್ದಾರೆ.

ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುತ್ತಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗಿ ಕಾಮಗಾರಿಗಳ ವೇಗ ಕುಂಠಿತವಾಗುವ ಸಾಧ್ಯತೆ ಎಂದು ಆತಂಕ ವ್ಯಕ್ತಪಡಿಸಿದರು.