2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

ಬೆಂಗಳೂರು, ಮಾರ್ಚ್, 3,2026 (www.justkannada.in): 2022ನೇ ವರ್ಷದಲ್ಲಿ ಪ್ರಥಮ ಮುದ್ರಣಗೊಂಡು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಯಾದ ಪುಸ್ತಕಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪಟ್ಟಿಯನ್ನು ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಗಳಲ್ಲಿ ಹಾಗೂ ಇಲಾಖೆಯ ಅಧಿಕೃತ ವೆಬ್‍ಸೈಟ್ www.dpl.karnataka.gov.in ನಲ್ಲಿ 2026 ನೇ ಮಾರ್ಚ್ 02 ರಂದು ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ :

ಆಯ್ಕೆಯಾದ ಪುಸ್ತಕಗಳ ಪಟ್ಟಿಯಲ್ಲಿರುವ ಲೇಖಕರು, ಲೇಖಕ – ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ತಮ್ಮ ಪುಸ್ತಕಗಳಿಗೆ ಸಂಬಂಧಿಸಿದ ಪುಸ್ತಕದ ಶೀರ್ಷಿಕೆ, ಲೇಖಕರ, ಪ್ರಕಾಶಕರ ಹೆಸರು, ಮುಖ ಬೆಲೆ (ನಿಗದಿತ ಬೆಲೆಯಲ್ಲಿ ವ್ಯತ್ಯಾಸವಿದ್ದಲ್ಲಿ), ಪುಸ್ತಕದ ಅಳತೆ ಮತ್ತು ಪುಟಗಳ ಸಂಖ್ಯೆ ಅಥವಾ ಇತರ ಯಾವುದೇ ತಾಂತ್ರಿಕ ವ್ಯತ್ಯಾಸಗಳಿದ್ದಲ್ಲಿ ತಮ್ಮ ಆಕ್ಷೇಪಣೆ ಅಥವಾ ತಿದ್ದುಪಡಿಗಳನ್ನು ಅಧಿಕೃತ ಮಾಹಿತಿ / ದಾಖಲೆಗಳೊಂದಿಗೆ 2026 ನೇ ಮಾರ್ಚ್ 16ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

ನಿಗದಿತ ಅವಧಿಯ ನಂತರ ಬರುವ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ ಮತ್ತು ಏಕಪಕ್ಷೀಯವಾಗಿ ನಿರ್ಣಯವನ್ನು ಕೈಗೊಳ್ಳಲಾಗುವುದು  ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: State-level, book selection list 2022,  published, objections