Sunday, September 20, 2026

BDA Apartments

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಿದೆ- ಮಾಜಿ ಸಿಎಂ ಸಿದ್ಧರಾಮಯ್ಯ… BDA JK_Adv B...
Home Front Page ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಿದೆ- ಮಾಜಿ ಸಿಎಂ ಸಿದ್ಧರಾಮಯ್ಯ…

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಬೇಕಿದೆ- ಮಾಜಿ ಸಿಎಂ ಸಿದ್ಧರಾಮಯ್ಯ…

ಬೆಂಗಳೂರು,ಜೂ,26,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವಿಕೆ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಬೇಕಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗಬೇಕಿದೆ. ಆರಂಭದಲ್ಲಿ ಪೂರ್ವ ಸಿದ್ಧತೆ ಇಲ್ಲದೇ ಲಾಕ್ ಡೌನ್ ಘೋಷಣೆ ಮಾಡಿದ್ದರು. ಇದರಿಂದ ಜನರ ಆರೋಗ್ಯ ರಾಜ್ಯದ ಆರ್ಥಿಕ ಸ್ಥಿತಿ ಹಾಳಾಯಿತು. ಈಗ ಕೊರೋನಾ ವ್ಯಾಪಕ ಹರಡುತ್ತಿದೆ. ಹೀಗಾಗಿ ಲಾಕ್ ಡೌನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ, ಆಗಲೇ ಲಾಕ್ ಡೌನ್ ಮಾಡಿ ಆರ್ಥಿಕತೆ ಹಾಳು ಮಾಡಿದ್ರು. ಈಗ ಲಾಕ್ ಡೌನ್ ಮಾಡಬೇಕಿತ್ತು. ಆಗ ಲಾಕ್ ಡೌನ್ ಮಾಡಿದ್ದು ತಪ್ಪು. ಸಿಎಂ ಬಿಎಸ್ ಯಡಿಯೂರಪ್ಪ ಸರ್ವಪಕ್ಷ ಸಭೆ ಕರೆಯಲಿ ಅಲ್ಲಿ ಎಲ್ಲಾ ವಿಚಾರ ಹೇಳುತ್ತೇವೆ ಎಂದು ಹೇಳಿದರು.

Key words: state -needs – lockdown- again-Former CM -Siddaramaiah