ಮಂಡ್ಯ, ಅಕ್ಟೋಬರ್,25,2025 (www.justkannada.in): ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸಾರ್ಥಕ ಪಯಣದ ಹಿನ್ನಲೆಯಲ್ಲಿ 50 ವರ್ಷಗಳ ಸಮರ್ಪಣೆ 31 ಜಿಲ್ಲೆಗಳು, ಒಂದೇ ಧ್ಯೇಯ ಮಾಲಿನ್ಯ ಮುಕ್ತ ಕರ್ನಾಟಕ ಎಂಬ ಧ್ಯೇಯ ವಾಕ್ಯದಡಿ “ಸುವರ್ಣ ಮಹೋತ್ಸವ” ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಿಗ್ಗೆ 10.00 ಗಂಟೆಗೆ ಮಂಡ್ಯ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಲೋಕಸಭಾ ಕ್ಷೇತ್ರದ ಸಂಸದ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ ಸರ್ಕಾರದ ಅರಣ್ಯ ಜೀವಿ ಪರಿಸ್ಥಿತಿ ಹಾಗೂ ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮತ್ತು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಕಾರ್ಯಕ್ರಮದ ಉಪಸ್ಥಿತಿ ವಹಿಸಲಿದ್ದಾರೆ.
ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ ಸಭಾ ಕ್ಷೇತ್ರದ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ, ಕರ್ನಾಟಕ ರಾಜ್ಯ ಆಹಾರ ಆಯೋಗ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ನಯೀಮ್, ಬೆಂಗಳೂರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ನಾಗಣ್ಣಗೌಡ, ಕರ್ನಾಟಕ ರಾಜ್ಯ ಒಕ್ಕಲಿಗರ ಸಮುದಾಯ ಅಭಿವೃದ್ಧಿ ನಿಗಮ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಅಧ್ಯಕ್ಷ ಡಾ. ಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ಅಧ್ಯಕ್ಷ, ಹುಬ್ಬಳ್ಳಿ ಬಿ. ನಾಗೇಂದ್ರ ಕುಮಾರ್ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸರ್ಕಾರದ ಅರಣ್ಯ ಜೀವಿ ಪರಿಸ್ಥಿತಿ ಹಾಗೂ ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸಲು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಎಸ್.ಎಸ್.ಲಿಂಗರಾಜು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಮನೋಜ್ ಕುಮಾರ್ ಮೀನಾ ಭಾಗವಹಿಸಲಿದ್ದಾರೆ.
Key words: Karnataka, State Pollution Control Board, Golden Jubilee, Oct. 28, Mandya







