ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು, ಏಪ್ರಿಲ್ ,1,2024 (www.justkannada.in):  ಲೋಕಸಭಾ ಚುನಾವಣೆ ಕಾವು ಹೆಚ್ಚಾಗಿದ್ದು ಈ ಮಧ್ಯೆ ರಾಜ್ಯ ಸರ್ಕಾರ ಜನತೆಗೆ ಸಿಹಿಸುದ್ದಿ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 ಈ ಕುರಿತು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ  ಅಧಿಕೃತ ಆದೇಶ ಹೊರಡಿಸಿದ್ದು, ಗೃಹ ಬಳಕೆಯಲ್ಲಿ 100 ಯುನಿಟ್​​ ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್ ​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಹಾಗೆಯೇ ಹೆಚ್.ಟಿ ವಾಣಿಜ್ಯ ಬಳಕೆಯ ಇಂಧನ ಶುಲ್ಕ ಪ್ರತಿ ಯೂನಿಟ್ ಗೆ 1 ರೂ. 25ಪೈಸೆ ಇಳಿಕೆ ಮಾಡಲಾಗಿದೆ, ಡಿಮಾಂಡ್ ಶುಲ್ಕ ಪ್ರತಿ ಕೆವಿಎಗೆ ರೂ.10 ಇಳಿಕೆ ಮಾಡಲಾಗಿದೆ ಎಂದಿದೆ.

ಇನ್ನೂ ಹೆಚ್.ಟಿ ಕೈಗಾರಿಕೆ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 50 ಪೈಸೆ ಮಾಡಿದ್ದರೇ,  ಹೆಚ್ ಟಿ ಖಾಸಗಿ ಏತ ನೀರಾವರಿ ಇಂಧನ ಬಳಕೆ ಶುಲ್ಕ ಪ್ರತಿ ಯೂನಿಟ್ ಗೆ 2 ರೂ. ಇಳಿಕೆ ಮಾಡಲಾಗಿದೆ. ಹೆಚ್ ಟಿ ನಿವಾಸ ಅಪಾರ್ಟ್ ಮೆಂಟ್ ಗಳ ಇಂಧನ ಬಳಕೆ ಶುಲ್ಕ ಪ್ರತಿ ಕೆವಿಎಗೆ ಡಿಮಾಂಡ್ ಶುಲ್ಕವನ್ನು ರೂ.10ರಷ್ಟು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದೆ.

 

Key words: State, reduce, electricity, rates