ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ, ರಾಜ್ಯ ಸರ್ಕಾರದಿಂದ “ಲಸಿಕೆ ಉತ್ಸವ” ಎನ್ನುವ ಬೂಟಾಟಿಕೆ : ರಾಜ್ಯ ಕಾಂಗ್ರೆಸ್ ಟೀಕೆ

ಬೆಂಗಳೂರು,ಏಪ್ರಿಲ್,15,2021(www.justkannada.in) : ವಾಸ್ತವದಲ್ಲಿ ರಾಜ್ಯದಲ್ಲಿ ಲಸಿಕೆಗಳಿಗೆ ತೀವ್ರ ಕೊರತೆ ಉಂಟಾಗಿದೆ. ಆದರೆ, ರಾಜ್ಯ ಸರ್ಕಾರ “ಲಸಿಕೆ ಉತ್ಸವ” ಎನ್ನುವ ಸುಳ್ಳುಗಳ ಭ್ರಮೆಯ ಉತ್ಸವ ನಡೆಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.

by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಜನರ ಮರಣದಲ್ಲೂ ಮಹೋತ್ಸವ ಆಚರಿಸಲು ಬಿಜೆಪಿಯಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ ಮಾತ್ರ ಸಾಧ್ಯ. ಪರಿಸ್ಥಿತಿ ಬಿಗಡಾಯಿಸುತ್ತಿದ್ದರೂ ಸೋಂಕಿತ ಸರ್ಕಾರಕ್ಕೆ ಇನ್ನೂ ಗಾಂಭೀರ್ಯತೆ ಬಂದಿಲ್ಲ ಎಂದು ಕಿಡಿಕಾರಿದೆ.ದೇಶದಲ್ಲಿ, ರಾಜ್ಯದಲ್ಲಿ ಕೋವಿಡ್ ಲಸಿಕೆಗಳ ಕೊರತೆ ಎದುರಾಗಿದೆ. ಅಲ್ಲಿ ನರೇಂದ್ರಮೋದಿ ಅವರು ಕೊರತೆ ನೀಗಿಸುವ ಬದಲು “ಟೀಕಾ ಉತ್ಸವ” ಎನ್ನುವ ಬೂಟಾಟಿಕೆ ಆಡುತ್ತಿದ್ದಾರೆ.state-vaccines-Severe-deficiency-State Government-Vaccine Festival-Hypocrisy-State Congressಇಲ್ಲಿ ರಾಜ್ಯ ಸರ್ಕಾರದ ನಾಯಕರು ಲಸಿಕೆ ಕೊರತೆ ಇಲ್ಲವೆಂದು ಸುಳ್ಳು ಹೇಳುತ್ತಿದ್ದಾರೆ. ಸಚಿವ ಸುಧಾಕರ್ ಅವರೇ ಲಸಿಕೆ ಕೊರತೆ ನೀಗಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದೆ.

key words : state-vaccines-Severe-deficiency-State Government-Vaccine Festival-Hypocrisy-State Congress