ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ರೆ ಯಾರೇ ಆದ್ರೂ ಕ್ರಮ ಖಚಿತ- ಡಿ.ಕೆ ಶಿವಕುಮಾರ್ ಎಚ್ಚರಿಕೆ.

ರಾಮನಗರ,ಜುಲೈ,23,2022(www.justkannada.in):  ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಪರೋಕ್ಷವಾಗಿ ಬಿಗ್ ಫೈಟ್ ನಡೆಯುತ್ತಿದ್ದು ಈ ಮಧ್ಯೆ ಮಾಜಿ ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿರುವ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ವಾಗ್ವಾದ ತಾರಕಕ್ಕೇರಿದೆ.

ಸಿದ್ಧರಾಮಯ್ಯ ಮುಂದಿನ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಟಾಂಗ್ ಕೊಟ್ಟಿದ್ದ ಡಿ.ಕೆ ಶಿವಕುಮಾರ್, ವ್ಯಕ್ತಿ ಪೂಜೆ ಬಿಟ್ಟು ಪಕ್ಷದ ಕೆಲಸ ಮಾಡಿ. ನಿಮ್ಮ ಸಮುದಾಯದ ಮತಗಳನ್ನ ಸೆಳೆಯಿರಿ ಎಂದಿದ್ದರು.

ಇದೀಗ ಮತ್ತೆ ಈ ಕುರಿತು ಕನಕಪುರದಲ್ಲಿ ಮಾತನಾಡಿರುವ ಡಿ.ಕೆ ಶಿವಕುಮಾರ್, ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟರೇ ಕ್ರಮ ಖಚಿತ. ಯಾರೇ ಡ್ಯಾಮೇಜ್ ಹೇಳಿಕೆ ಕೊಟ್ಟರೂ ಪಕ್ಷದಿಂದ ಕ್ರಮ ಕೈಗೊಳ್ಳಲಾಗುತ್ತದೆ. ಜಮೀರ್ ಹೇಳಿಕೆಗಳ ಕುರಿತು ಶಿಸ್ತು ಸಮಿತಿಗೆ ತಿಳಿಸುತ್ತೇನೆ.  ಕಾಂಗ್ರೆಸ್ ಶಿಸ್ತು ಕ್ರಮ ಸಮಿತಿಯಿಂದಲೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

Key words: statement – damage – party-action-DK Shivakumar