ಇಂತಹ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ-ಜಮೀರ್ ಅಹ್ಮದ್ ಖಾನ್ ವಿರುದ್ದ ಸಚಿವ ಮಧು ಬಂಗಾರಪ್ಪ ಅಸಮಾಧಾನ.

ಶಿವಮೊಗ್ಗ,ನವೆಂಬರ್,20,2023(www.justkannada.in): ಮುಸ್ಲೀಂರನ್ನ ದ್ವೇಷಿಸುತ್ತಿದ್ದ ಬಿಜೆಪಿ ನಾಯಕರು ಈಗ ಬಿಜಿಪಿ ಶಾಸಕರು ಈಗ ಸ್ಪೀಕರ್ ಸಾಬ್ ಎಂದು ನಮಸ್ಕರಿಸುತ್ತಿದ್ದಾರೆ. ಹೀಗೆ ಮಾಡಿದ್ದು ಕಾಂಗ್ರೆಸ್ ಎಂದು ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಸಚಿವ ಮಧು ಬಂಗಾರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಮಧುಬಂಗಾರಪ್ಪ, ಇಂತಹ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಯಾವ ರೀತಿಯಲ್ಲಿ ಹೇಳಿದ್ದಾರೆಂದು  ಜಮೀರ್ ಅವರೇ ಉತ್ತರ ಕೊಡಬೇಕಾಗುತ್ತದೆ. ನಮ್ಮಂಥವರು ಕೆಲವೊಮ್ಮೆ ಮಾತಾಡುವಾಗ ಹುಷಾರಾಗಿ ಇರಬೇಕು. ನಮ್ಮ ಸರ್ಕಾರ ಧರ್ಮಾತೀತವಾಗಿ ಒಳ್ಳೆ ಉದ್ದೇಶಕ್ಕೆ ಕೆಲಸ ಮಾಡುತ್ತಿದೆ ಎಂದರು.

Key words: statements – damage – Congress party- Minister -Madhu Bangarappa -Jameer Ahmed Khan