ಸೋನಿಯಾಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ: ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ.

ಬೆಂಗಳೂರು,ಜುಲೈ,22,2022(www.justkannada.in): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ರಾಜ್ಯಾದ್ಯಂತ ಇಂದು ಸಹ ಕಾಂಗ್ರೆಸ್ ಹೋರಾಟದ ಕಿಚ್ಚು ಮುಂದುವರೆದಿದೆ. ರಾಜ್ಯದ ಜಿಲ್ಲಾ ವಿಭಾಗಗಳಲ್ಲಿ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಪರ ದಾವಣಗೆರೆ, ಹುಬ್ಬಳ್ಳಿ,ಕೋಲಾರ ಉಡುಪಿ ಮಂಡ್ಯ, ಶಿವಮೊಗ್ಗ ಸೇರಿ ರಾಜ್ಯಾದ್ಯಂತ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ದಾವಣಗೆರೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೇ ಹುಬ್ಬಳ್ಳಿಯಲ್ಲಿ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ವೃತ್ತದಿಂದ ಚೆನ್ನಮ್ಮ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರದ ವಿರುದ್ಧ ಕಿಡಿಕಾರಿದರು.

ಇನ್ನು ಶಿವಮೊಗ್ಗದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಾಜಿ ಸಚಿವ  ಕಿಮ್ಮನೆ ರತ್ನಾಕರ್, ಬೇಳೂರು ಗೋಪಾಲಕೃಷ್ಣ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Key words: Statewide -Congress -protest -against -ED – Sonia Gandhi