ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಆಗ್ರಹಿಸಿ ನ.2 ರಂದು ರಾಜ್ಯಾದ್ಯಂತ ಪ್ರತಿಭಟನೆ- ಕುರುಬೂರು ಶಾಂತಕುಮಾರ್…

ಮೈಸೂರು,ಅಕ್ಟೋಬರ್,30,2020(www.justkannada.in): ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನವೆಂಬರ್ 2ರಂದು ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.jk-logo-justkannada-logo

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕುರುಬೂರು ಶಾಂತಕುಮಾರ್, ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಂತೆ ಹಾಗೂ ಭತ್ತ ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ನವೆಂಬರ್ 2ರಂದು  ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕಚೇರಿ ಮುಂದೆ ಪ್ರತಿಭಟನಾ ಧರಣಿ ಮಾಡಲಾಗುತ್ತದೆ. ಸಕ್ಕರೆ ಕಾರ್ಖಾನೆಗಳು ರೈತರಿಗೆ ಅನ್ಯಾಯ ಮಾಡುತ್ತಿವೆ. ಸಕ್ಕರೆ ಇಳುವರಿ‌ ಕಮ್ಮಿ ತೋರಿಸಿ ಕಬ್ಬಿಗೆ ಸರಿಯಾದ ಬೆಲೆ ನೀಡುತ್ತಿಲ್ಲ. ನಿಗದಿತ ಸಮಯಕ್ಕೆ ಕಬ್ಬು ಕಟಾವು ಮಾಡುತ್ತಿಲ್ಲ. ಹೀಗಾಯ ರೈತರಿಗೆ ಬಾರಿ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.statewide-protests-november-2-demanding-price-sugarcane-mysore-kuruburu-shanthakumar

ಜತೆ ಕೂಡಲೇ ಭತ್ತ ಖರೀದಿ ಕೇಂದ್ರ ಆರಂಭಿಸಬೇಕು. ಕನಿಷ್ಠ ಬೆಂಬಲ ಬೆಲೆಗೆ ಪ್ರೋತ್ಸಾಹಧನ ನೀಡಬೇಕು. ಪ್ರವಾಹ, ಅತಿವೃಷ್ಠಿ ಹಾನಿ, ಬೆಳೆನಾಶಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. ಈ ಎಲ್ಲಾ ವಿಷಯಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರಿನಲ್ಲಿ ನ.2ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದರು.

Key words: Statewide- protests -november 2 -demanding – price – sugarcane-mysore-Kuruburu Shanthakumar.