ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ…?

ಮೈಸೂರು,ನವೆಂಬರ್,04,2020(www.justkannada.in) :  ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಜೊತೆಗೆ ಇದ್ದ ಕಾರ್ಯಕರ್ತರಿಗೆ ಪಾಠ ಮಾಡಿದರು.jk-logo-justkannada-logoಮೈಸೂರು ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಲು ಮುಂದಾದ ವೇಳೆ ಕಾರ್ಯಕರ್ತರು ಅವರನ್ನು ಸುತ್ತುವರಿಯಲು ಮುಂದಾದರು. ಈ ಸಂದರ್ಭ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ ಎಂದು ಸಲಹೆ ನೀಡಿದರು.

ನೀವು ನನ್ನ ಹತ್ತಿರ ನಿಂತರೆ ಮಾಧ್ಯಮಗಳ ಜೊತೆಗೆ ನಾನು ಮಾತನಾಡುವುದಿಲ್ಲ

ಕೊರೊನಾ ಮುಂಜಾಗ್ರತ ಕ್ರಮವಾಗಿ ಸ್ವತಃ ತಮ್ಮ ರಕ್ಷಣೆಗೆ ತಾವೇ ಮುಂದಾದ ಸಿದ್ದರಾಮಯ್ಯ ಅವರು, ತಮ್ಮ ಬಳಿಗೆ ಬರುತ್ತಿದ್ದ ಕಾರ್ಯಕರ್ತರಿಗೆ ನೀವು ನನ್ನ ಹತ್ತಿರ ನಿಂತರೆ ಮಾಧ್ಯಮಗಳ ಜೊತೆಗೆ ನಾನು ಮಾತನಾಡುವುದಿಲ್ಲ.  ಎಲ್ಲರೂ ನನ್ನಿಂದ ದೂರ ಇರಿ, 6 ಅಡಿ ದೂರ ನಿಂತುಕೊಳ್ಳಿ. ನನ್ನ ಅಕ್ಕ ಪಕ್ಕ ನಿಂತುಕೊಂಡರೂ ನಾನು ಬರುವುದಿಲ್ಲ ಎಂದು ತಮ್ಮ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತರನ್ನು ದೂರ ನಿಲ್ಲಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡಿದ್ದು ಕಂಡು ಬಂತು.Stay-away-me-6 feet-away-Stand-Former CM-Siddaramaiah-whom-said ...?

key words : Stay-away-me-6 feet-away-Stand-Former CM-Siddaramaiah-whom-said …?