ಬೆಂಗಳೂರು, ಅಕ್ಟೋಬರ್,24,2026 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕುರಿತ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (ನಗರ ಅಪರಾಧ ವಿಭಾಗ) ಅಧಿಕಾರಿಗಳು ದೆಹಲಿ ಮೂಲದ ವ್ಯಕ್ತಿಯೊಬ್ಬರನ್ನ ಬಂಧಿಸಿದ್ದಾರೆ.
ದೆಹಲಿ ಮೂಲದ ರಿತೇಶ್ ಬಂಧಿತ ವ್ಯಕ್ತಿ. ರಿತೇಶ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪೊಲೀಸರು 2 ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ವಿಡಿಯೋ ಅಪಲೋಡ್ ಮಾಡಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
ಸ್ಟಿಂಗ್ ಮಾಡಿರವವರು ಬೇರೆ ವಿಡಿಯೋ ಹಾಕಿರುವವರೇ ಬೇರೆ ಎಂದು ತನಿಖೆ ವೇಳೆ ಮಾಹಿತಿ ಲಭ್ಯವಾಗಿದೆ. ಈತ ಸ್ಟಿಂಗ್ ಕಾರ್ಯಾಚರಣೆ ನಡೆಸುವ ಉದ್ದೇಶದಿಂದಲೇ ಸೆಕೆಂಡ್ ಹ್ಯಾಂಡ್ ಮೊಬೈಲ್ ಫೋನ್ ಒಂದನ್ನು ಖರೀದಿಸಿದ್ದ ಎನ್ನುವ ಮಾಹಿತಿ ತನಿಖೆಯಲ್ಲಿ ಬಹಿರಂಗಗೊಂಡಿದೆ. ಸದ್ಯಕ್ಕೆ, ರಿತೇಶ್‌ನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.






