ಬೆಂಗಳೂರು,ಅಕ್ಟೋಬರ್,25,2026 (www.justkannda.in): ಸ್ಟಿಂಗ್ ಆಪರೇಷನ್ ಪ್ರಕರಣ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಅಗತ್ಯ ಇದೆಯಾ? ಸ್ಟಿಂಗ್ ವಿಚಾರದಲ್ಲಿ ಹೈಕಮಾಂಡ್ ಅನ್ನು ಏಕೆ ಎಳೆದು ತರಬೇಕು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಸರ್ಕಾರ ಹಾಗೂ ಪಕ್ಷಕ್ಕೆ ಡ್ಯಾಮೇಜ್ ಬಗ್ಗೆ ಚರ್ಚಿಸಬೇಕು. ಸಿಎಂ ಡಿಕೆ ಶಿವಕುಮಾರ್ , ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಚರ್ಚಿಸಬೇಕು. ಸ್ಥಳೀಯವಾಗಿ ಡ್ಯಾಮೇಜ್ ಕಂಟ್ರೋಲ್ ಬಗ್ಗೆ ಚರ್ಚೆ ಮಾಡಲಿ. ಎಲ್ಲದಕ್ಕೂ ಹೈಕಮಾಂಡ್ ಅಂತಾ ಹೋಗೋದು ಸರಿಯಲ್ಲ ಎಂದು ಸಲಹೆ ನೀಡಿದರು.
ಸ್ಟಿಂಗ್ ಪ್ರಕರಣದಲ್ಲಿ ನಡೆಯುತ್ತಿರುವ ಜಟಾಪಟಿ ಬಗ್ಗೆ ಸರ್ಕಾರ ಪಕ್ಷಕ್ಕೆ ಮುಜುಗರ ತರುತ್ತಿರುವುದಕ್ಕೆ ಡಿಸಿಎಂ ಪರಮೇಶ್ವರ್ ಈ ರೀತಿಯಾಗಿ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.






