Sunday, August 23, 2026

BDA Apartments

Home Front Page ಮನೆ ಮೇಲೆ ಕಲ್ಲು ತೂರಾಟ:  ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ- ಮಾಜಿ ಸಿಎಂ ಬಿಎಸ್...

ಮನೆ ಮೇಲೆ ಕಲ್ಲು ತೂರಾಟ:  ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಮಾರ್ಚ್,27,2023(www.justkannada.in):  ಶಿಕಾರಿಪುರದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ತಮ್ಮ ಮನೆ ಮೇಲೆ ನಡೆದ ಕಲ್ಲು ತೂರಾಟ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ತಪ್ಪು ಗ್ರಹಿಕೆಯಿಂದ ಈ ಘಟನೆ ನಡೆದಿದೆ. ಸಮುದಾಯದ ಹಿರಿಯ ಮುಖಂಡರ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ. ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ ಎಂದರು.

ಬಂಜಾರ ಸಮುದಾಯದ ನ್ಯಾಯಯುತವಾದ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ. ನಾನು 4 ಸಲ ಸಿಎಂ ಆಗಲು ಬಂಜಾರ ಸಮುದಾಯ ಕಾರಣ. ಬಂಜಾರ ಸಮುದಾಯದವರು ಶಾಂತಿಯಿಂದ ವರ್ತಿಸಬೇಕು.  ಸಮಾಜಘಾತುಕ ಶಕ್ತಿಗಳ ಮಾತು ಕೇಳಬೇಡಿ. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಮಾತನಾಡುತ್ತೇನೆ ಎಂದು ಬಿಎಸ್ ವೈ ತಿಳಿಸಿದರು.

Key words: Stone – house-incident-due – misunderstanding – Former CM- BS Yeddyurappa.