ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ: ಇದು ಬಿಜೆಪಿಯ ಆಂತರಿಕ ಕುತಂತ್ರ ಎಂದ ಡಿ.ಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,28,2023(www.justkannada.in): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣ, ಇದು ಬಿಜೆಪಿಯ ಆಂತರಿಕ ಕುತಂತ್ರ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಡಿ.ಕೆ ಶಿವಕುಮಾರ್,  ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲ ಮಾಡುತ್ತಿದ್ದಾರೆ.  ಬಿಎಸ್ ವೈ ಅವರನ್ನ ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮನೆ ಮೇಲೆ ಕಲ್ಲು ಹೊಡೆದಿದ್ರೆ ಓಕೆ. ಆದರೆ ಬಿಎಸ್ ವೈ ಮನೆ ಮೇಲೆ ಕಲ್ಲು ಹೊಡೆಯುತ್ತಾರೆ ಅಂದ್ರೆ ಏನರ್ಥ ಇದು ಬಿಜೆಪಿ ಆಂತರಿಕ ಸಮಸ್ಯೆ. ಬಿಎಸ್ ವೈ ರಾಜಕೀಯವಾಗಿ ಮುಗಿಸಬೇಕು ಎಂದು ತಂತ್ರ ಮಾಡಿದ್ದಾರೆ ಎಂದು ಕಿಡಿಕಾರಿದರು.

Key words: stone- pelting – BSY –house-DK Shivakumar