Tuesday, September 22, 2026

BDA Apartments

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್: 18 ಆರೋಪಿಗಳಿಗೆ ನ್ಯಾಯಾಂಗ ಬಂಧನ BDA JK_A...
Home Crime ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್: 18 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್: 18 ಆರೋಪಿಗಳಿಗೆ ನ್ಯಾಯಾಂಗ ಬಂಧನ

ದಾವಣಗೆರೆ, ಸೆಪ್ಟಂಬರ್,20,2024 (www.justkannada.in):  ನಿನ್ನೆ ದಾವಣಗೆರೆ ನಗರದಲ್ಲಿ ಗಣೇಶ ವಿಸರ್ಜನೆ   ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ  ಮೇಲೆ 18 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದಾವಣಗೆರೆಯಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯ ಬಸವ ನಗರ ಠಾಣೆಯಲ್ಲಿ ಈ ಕುರಿತು ಎರಡು ಪ್ರಕರಣ ದಾಖಲಾಗಿತ್ತು.

ಎಂಸಿಸಿಎ ಬ್ಲಾಕ್ ನಲ್ಲಿರುವ ಜಡ್ಜ್ ಪ್ರಶಾಂತ ನಿವಾಸದಲ್ಲಿ ಇದೀಗ ಬಂಧಿತ 18 ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. 18 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜಡ್ಜ್ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

Key words: Stone pelting case, Davanagere, Judicial custody, 18 accused