“ತಕ್ಷಣವೇ ಅಕ್ರಮ ಗಣಿಗಾರಿಕೆ ನಿಲ್ಲಿಸಿ” : ಡಿಸಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ

ಬೆಂಗಳೂರು,ಜನವರಿ,24,2021(www.justkannada.in) : ತಕ್ಷಣವೇ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ರಾಜ್ಯದ ಎಲ್ಲಾ ಡಿಸಿಗಳಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.jk

ಶಿವಮೊಗ್ಗ ಜಿಲೆಟಿನ್ ಸ್ಫೋಟ ಹಿನ್ನೆಲೆ ಕುರಿತು ಮಾತನಾಡಿದ ಅವರು, ಜಿಲೆಟಿನ್ ಸ್ಫೋಟಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರ ಬಂಧಿಸಲಾಗಿದೆ. ತನಿಖೆ ಬಳಿಕ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.Stop-illegal-mining-immediately-CM B.S.Yeddyurappa-notified-DC

ಗಣಿಗಾರಿಕೆ ಸಕ್ರಮಗೊಳಿಸಲು ಅರ್ಜಿ ಹಾಕಿ ನಂತರ ಪಡೆಯಬೇಕು. ಬೇಬಿ ಬೆಟ್ಟ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್ ಎಸ್ ಜಲಾಶಯಕ್ಕೆ ಸಮಸ್ಯೆ ಅಗುತ್ತದೆ. ಕೂಡಲೇ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಿಬೇಕು ಎಂದು ಹೇಳಿದ್ದಾರೆ.

key words : Stop-illegal-mining-immediately-CM B.S.Yeddyurappa-notified-DC